ಕೊಯಮತ್ತೂರಿನಲ್ಲಿರುವ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ…

65
firstsuddi

ಚೆನ್ನೈ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಬಿಜೆಪಿ ಕಚೇರಿ ಮೇಲೆ ನಿನ್ನೆ ರಾತ್ರಿ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಆದರೆ, ಯಾವುದೇ ರೀತಿಯ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ನಿನ್ನೆ ದೇಶಾದ್ಯಂತ ಹಲವು ಭಾಗಗಳಲ್ಲಿ ಪಿಎಫ್ ಐ ಕಚೇರಿಗಳ ಮೇಲೆ ದಾಳಿ ನಡೆಸಿ, ಅನೇಕ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ ಎಂದು ಶಂಕಿಸಲಾಗಿದೆ.

ಬಿಜೆಪಿ ಕಚೇರಿ ಮೇಲೆ ದಾಳಿ ನಡೆಸಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಘಟನೆಗೆ ಸಂಬಂಧಿಸಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಕೊಯಮತ್ತೂರು ಪಕ್ಷದ ಕಚೇರಿಯ ಮೇಲೆ ಪೆಟ್ರೋಲ್ ಬಾಂಬ್ ಎಸೆದ್ದಾರೆ. ಆದರೆ ಈ ಘಟನೆಯಿಂದ ನಮ್ಮ ಸಹೋದರ ಸಹೋದರಿಯರನ್ನು ತಡೆಯಲು ಸಾಧ್ಯವಿಲ್ಲ. ಇದು ನಮ್ಮ ಸಮಾಜ ಮತ್ತು ದೇಶಕ್ಕೆ ದ್ರೋಹ ಬಗೆಯುವ ಶಕ್ತಿಗಳ ವಿರುದ್ಧ ಕಠಿಣವಾಗಿ ಹೋರಾಡುವ ನಮ್ಮ ಸಂಕಲ್ಪವನ್ನು ಬಲಪಡಿಸುತ್ತದೆ ಎಂದು ತಮಿಳುನಾಡಿನ ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ಟ್ವೀಟ್ ಮಾಡಿದ್ದಾರೆ.