ಮೂಡಿಗೆರೆ : ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ 42ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ಚೆಕ್ ಬೌನ್ಸ್ ಪ್ರಕರಣದ ವಿಚಾರಣೆಗೆ ಅನಾರೋಗ್ಯದ ಕಾರಣ ನೀಡಿ ವಿಚಾರಣೆಗೆ ಗೈರಾಗಿದ್ದ ಕುಮಾರಸ್ವಾಮಿ, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಕುರಿತು ಪತ್ರಿಕಾ ವರದಿಯನ್ನು ದೂರುದಾರ ಹೂವಪ್ಪಗೌಡ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಹೀಗಾಗಿ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ಅಕ್ಟೋಬರ್ 10 ರಂದು ಎಂ.ಪಿ.ಕುಮಾರಸ್ವಾಮಿ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶ ನೀಡಿದೆ.










