ಪೇ ಸಿಎಂ ಅಭಿಯಾನ – ಕಾಂಗ್ರೆಸ್‍ನವರದ್ದು ಡರ್ಟಿ ಪಾಲಿಟಿಕ್ಸ್ ಎಂದ ಸಿಎಂ.

52
firstsuddi

ಚಿತ್ರದುರ್ಗ : ಪೇ ಸಿಎಂ ಅಭಿಯಾನ ನಡೆಸುತ್ತಿರುವ ಕಾಂಗ್ರೆಸ್‍ನವರದ್ದು ಡರ್ಟಿ ಪಾಲಿಟಿಕ್ಸ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಿಡಿಕಾರಿದರು. ತಾಲೂಕಿನ ಸಿರಿಗೆರೆ ಗ್ರಾಮದ ತರಳಬಾಳು ಮಠದಲ್ಲಿ ನಡೆಯುತ್ತಿರುವ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಗಳ 30ನೇ ಶ್ರದ್ಧಾಂಜಲಿ ಸಮಾರಂಭದಲ್ಲಿ ಪಾಲ್ಗೊಳ್ಳುವ ಮುನ್ನ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಪೇ ಸಿಎಂ ಅಭಿಯಾನ ಕಾಂಗ್ರೆಸ್ ನಾಯಕರ ನೈತಿಕ ಅಧಃಪತನ ತೋರಲಿದೆ. ಪೇ ಸಿಎಂ ಅಭಿಯಾನದ ಬಗ್ಗೆ ಕಾನೂನು ಕ್ರಮಕೈಗೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದ್ದು, ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಪಿಎಫ್ ಐ ಮತ್ತು ಎಸ್ ಡಿಪಿಐ ಕಚೇರಿ, ಮುಖಂಡರ ಮನೆ ಮೇಲೆ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಈ ಬಗ್ಗೆ ಎನ್ ಐಎ ಹಾಗೂ ರಾಜ್ಯ ಸರ್ಕಾರ ಕಾನೂನು ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.