ಹೊಸ ಪಕ್ಷದ ಹೆಸರನ್ನು ಘೋಷಿಸಿದ ಗುಲಾಂ ನಬಿ ಆಜಾದ್.

51
firstsuddi

ಶ್ರೀನಗರ : ಹಿರಿಯ ನಾಯಕ, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಅವರು ಇಂದು ‘ಡೆಮಾಕ್ರಟಿಕ್ ಆಜಾದ್ ಪಾರ್ಟಿ’ ಹೆಸರಿನ ಹೊಸ ಪಕ್ಷವನ್ನು ಘೋಷಿಸಿದ್ದಾರೆ.

ಹಳದಿ, ಬಿಳಿ ಮತ್ತು ನೀಲಿ ಬಣ್ಣಗಳನ್ನು ಹೊಂದಿರುವ ಡೆಮಾಕ್ರಟಿಕ್ ಆಜಾದ್ ಪಕ್ಷದ ಧ್ವಜವನ್ನು ಸಹ ಅವರು ಅನಾವರಣಗೊಳಿಸಿದರು. ಜಮ್ಮುವಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಮ್ಮ ನೂತನ ಪಕ್ಷ ಜಾತ್ಯತೀತ. ಪ್ರಜಾಸತ್ತಾತ್ಮಕ ಮತ್ತು ಸ್ವತಂತ್ರವಾಗಿರಲಿದ್ದು ಯಾವುದೇ ಪ್ರಭಾವ, ಆಮಿಷಗಳಿಗೆ ಒಳಗಾಗುವುದಿಲ್ಲ ಎಂದಿದ್ದಾರೆ.

ಹಳದಿ ಬಣ್ಣವು ಸೃಜನಶೀಲತೆ ಮತ್ತು ವೈವಿಧ್ಯತೆಯಲ್ಲಿ ಏಕತೆಯನ್ನು ಸೂಚಿಸುತ್ತದೆ, ಬಿಳಿ ಶಾಂತಿಯನ್ನು ಸೂಚಿಸುತ್ತದೆ ಮತ್ತು ನೀಲಿ ಸ್ವಾತಂತ್ರ್ಯ, ಮುಕ್ತ ಸ್ಥಳ, ಕಲ್ಪನೆ ಮತ್ತು ಸಮುದ್ರದ ಆಳದಿಂದ ಆಕಾಶದ ಎತ್ತರದವರೆಗಿನ ಮಿತಿಗಳನ್ನು ಸೂಚಿಸುತ್ತದೆ ಎಂದು ತಿಳಿಸಿದ್ದಾರೆ.

ಆಜಾದ್ ಅವರು ಆಗಸ್ಟ್ 26 ರಂದು ಕಾಂಗ್ರೆಸ್  ಜೊತೆಗಿನ ದಶಕಗಳ ಕಾಲದ ಒಡನಾಟವನ್ನು ಕೊನೆಗೊಳಿಸಿ ರಾಜೀನಾಮೆ ನೀಡಿದ್ದರು.