ಅಂಗಾಂಗ ದಾನ ಮಾಡಿ ಇತರರ ಬಾಳಿಗೆ ಬೆಳಕಾದ ಯುವಕ…

53
firstsuddi

ಬೆಂಗಳೂರು : ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೆಂಗಳೂರು ಗ್ರಾಮಾಂತರ ಗಂಗೊಂಡನಹಳ್ಳಿಯ ಯುವಕ ದೀಪಕ್ (26) ಎಂಬಾತನ ಮೆದುಳು ನಿಷ್ಕ್ರಿಯಗೊಂಡಿದ್ದು, ಕುಟುಂಸ್ಥರು ಅಂಗಾಂಗ ದಾನ ಮಾಡಲು ನಿರ್ಧರಿಸಿದ್ದಾರೆ. ಅಂಗಾಂಗ ದಾನದ ಮೂಲಕ ಸಾವಿನಲ್ಲೂ ಇತರರ ಬಾಳಿಗೆ ಯುವಕ ಬೆಳಕಾಗಿದ್ದಾನೆ.

ಸೆ.25 ರಂದು ನೈಸ್ ರಸ್ತೆಯಲ್ಲಿ ನಿಂತಿದ್ದ ಕ್ಯಾಂಟರಿಗೆ ದೀಪಕ್ ಅವರ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ನಡೆದಿತ್ತು. ಅಪಘಾತದಲ್ಲಿ ದೀಪಕ್ ಮೆದುಳು ನಿಷ್ಕ್ರಿಯವಾಗಿತ್ತು. ಹೀಗಾಗಿ ದೀಪಕ್ ಅವರ ಅಂಗಾಂಗ ದಾನಕ್ಕೆ ಕುಟುಂಬಸ್ಥರು ಮುಂದಾಗಿದ್ದು, ಕಿಡ್ನಿ, ಕಣ್ಣು, ಚರ್ಮ ಸೇರಿದಂತೆ ಇತರೆ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಲಾಗಿದೆ. ಸದ್ಯ ಆರ್.ಆರ್.ನಗರದ ಖಾಸಗಿ ಆಸ್ಪತ್ರೆಯಲ್ಲಿ ದೀಪಕ್ ಅವರ ಮೃತದೇಹವಿದೆ.