ಮುರುಘಾ ಶ್ರೀಗಳಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ…

55
firstsuddi

ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾ ಶ್ರೀಗಳಿಗೆ ಸದ್ಯಕ್ಕೆ ರಿಲೀಫ್‌ ಸಿಕ್ಕಿಲ್ಲ. ಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳಿಗೆ ವಿಸ್ತರಿಸಲಾಗಿದೆ.

ಅ.10ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಚಿತ್ರದುರ್ಗ ಜಿಲ್ಲಾ 2ನೇ ಅಪರ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಪ್ರಕರಣದಲ್ಲಿ ಮುರುಘಾ ಶ್ರೀಗಳಿಗೆ ವಿಧಿಸಿದ್ದ ನ್ಯಾಯಾಂಗ ಬಂಧನ ಇಂದಿಗೆ ಕೊನೆಯಾಗಿತ್ತು. ಇಂದು ಮತ್ತೆ ವಿಚಾರಣೆ ನಡೆಸಿದ ನ್ಯಾಯಾಲಯ, ಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ ಆದೇಶಿಸಿದೆ. 2ನೇ ಆರೋಪಿ ಲೇಡಿ ವಾರ್ಡನ್ ಗೂ 14 ದಿನ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ನೀಡಿದೆ. ಕೋರ್ಟ್‌ನಿಂದ ಶ್ರೀಗಳನ್ನು ಮತ್ತೆ ಪೊಲೀಸರು ಜಿಲ್ಲಾ ಕಾರಾಗೃಹಕ್ಕೆ ಕರೆದೊಯ್ದಿದ್ದಾರೆ.