ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ (ಡಿಎ)ಯನ್ನು ಶೇ.4ರಷ್ಟು ಹೆಚ್ಚಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ.
ಈ ಕುರಿತು ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ (ಡಿಎ) ಶೇ 4ರಷ್ಟು ಹೆಚ್ಚಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದು 2022ರ ಜುಲೈ 1ರಿಂದಲೇ ಪೂರ್ವಾನ್ವಯವಾಗಲಿದೆ. ತುಟ್ಟಿ ಭತ್ಯೆ ಹೆಚ್ಚಳದಿಂದಾಗಿ ಶೇ.34ರಷ್ಟಿದ್ದ ತುಟ್ಟಿಭತ್ಯೆ ಈಗ ಶೇ.38ಕ್ಕೆ ಏರಿಕೆಯಾಗಿದೆ. ಸರ್ಕಾರದ ಈ ನಿರ್ಧಾರದಿಂದ ಸುಮಾರು 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 62 ಲಕ್ಷ ಪಿಂಚಣಿದಾರರಿಗೆ ಲಾಭವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.










