ಬೆಂಗಳೂರು : ಡಿಸೆಂಬರ್ 31 ರೊಳಗೆ ಬಿಬಿಎಂಪಿ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಹೊಸ ಮೀಸಲಾತಿ ಪಟ್ಟಿಗೆ 16 ವಾರಗಳ ಕಾಲಾವಕಾಶ ಬೇಕು ಎಂದು ಸರ್ಕಾರ ಕೋರ್ಟ್ ಗೆ ಮನವಿ ಸಲ್ಲಿಸಿತ್ತು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾ.ಹೇಮಂತ್ ಚಂದನ್ ಗೌಡರ್ ಅವರ ಪೀಠ, ಇಷ್ಟು ಸಮಯ ಕೇಳಿದರೆ ತಕ್ಷಣ ಚುನಾವಣೆಗೆ ಆದೇಶಿಬೇಕಾದೀತು. ಮೀಸಲಾತಿ ಪಟ್ಟಿಯನ್ನು ನವೆಂಬರ್ 30 ರೊಳಗೆ ಸರಿಪಡಿಸಿ ಪ್ರಕಟಿಸಿ ಡಿಸೆಂಬರ್ 31 ರೊಳಗೆ ಬಿಬಿಎಂಪಿ ಚುನಾವಣೆ ನಡೆಸಬೇಕು. ಮೀಸಲಾತಿ ಪಟ್ಟಿ ಘೋಷಿಸಿದ 30 ದಿನಗಳ ಒಳಗೆ ಚುನಾವಣೆ ನಡೆಸಲು ಸರ್ಕಾರಕ್ಕೆ ನಿರ್ದೇಶನ ನೀಡಿದೆ.










