ಕರ್ನಾಟಕ ಹೈಕೋರ್ಟ್​ಗೆ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಬಿ.ವರಾಲೆ

55
firstsuddi

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ ಮುಂದಿನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಬಾಂಬೆ ಹೈಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಲೆ ಹೆಸರನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ಅವರ ನೇತೃತ್ವದ ಕೊಲಿಜಿಯಂ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಪಿ.ಬಿ. ವರಾಲೆ ಅವರು ಆಗಸ್ಟ್ 12, 1985 ರಂದು ವಕೀಲರಾಗಿ ವೃತ್ತಿ ಜೀವನವನ್ನು ಆರಂಭಿಸಿದರು. ಅವರು 1990 ರಿಂದ 1992 ರವರೆಗೆ ಕೆಲವು ಔರಂಗಾಬಾದ್ ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು. ಔರಂಗಾಬಾದ್ ನ ಹೈಕೋರ್ಟ್ ಬೆಂಚ್ ನಲ್ಲಿ ಸಹಾಯಕ ಸರ್ಕಾರಿ ವಕೀಲರಾಗಿ ಮತ್ತು ಹೆಚ್ಚುವರಿ ಸಾರ್ವಜನಿಕ ಅಭಿಯೋಜಕರಾಗಿ ಮತ್ತು ಯೂನಿಯನ್ ಆಫ್ ಇಂಡಿಯಾದ ಹೆಚ್ಚುವರಿ ಸ್ಥಾಯಿ ವಕೀಲರಾಗಿ ಕೆಲಸ ಮಾಡಿದರು. ಇದಾದ ನಂತರ ಅವರು ಜುಲೈ18, 2008 ರಂದು ಬಾಂಬೆ ಹೈಕೋರ್ಟ್ ನ ನ್ಯಾಯಾಧೀಶರಾಗಿ ನೇಮಕಗೊಂಡರು.