ಮುಲಾಯಂ ಸಿಂಗ್ ಯಾದವ್ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ.

62
firstsuddi

ಲಕ್ನೋ : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ (ಎಸ್ ಪಿ) ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಹದಗೆಟ್ಟಿದ್ದು, ನಿನ್ನೆ ಅವರನ್ನು ಗುರುಗ್ರಾಮ್ ನ ಮೇದಾಂತ ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಗಿದೆ. ಸದ್ಯ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡಿದೆ.

ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ಪಡೆಯಲು ಮುಲಾಯಂ ಪುತ್ರ ಅಖಿಲೇಶ್ ಯಾದವ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಮತ್ತೊಂದೆಡೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಖಿಲೇಶ್ ಯಾದವ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಅವರ ತಂದೆಯ ಯೋಗಕ್ಷೇಮವನ್ನು ವಿಚಾರಿಸಿದ್ದಾರೆ ಎಂದು ತಿಳಿದುಬಂದಿದೆ. ಮುಲಾಯಂ ಅವರು ಶೀಘ್ರ ಗುಣಮುಖರಾಗಲಿ ಎಂದು ಸಿಎಂ ಹಾರೈಸಿದರು ಎಂದು ಮೂಲಗಳು ತಿಳಿಸಿವೆ.