ಬೆಂಗಳೂರು: ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಸಿಐಡಿ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಜಿ.ಕೆ. ಮಿಥುನ್‌ಕುಮಾರ್ ಅವರನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಸೈದುಲ್ಲಾ ಅದಾವತ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಭಯೋತ್ಪಾದನೆ ನಿಗ್ರಹ ಕೇಂದ್ರದ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ಭಯೋತ್ಪಾದನೆ ನಿಗ್ರಹ ಕೇಂದ್ರದ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ರಂಜಿತ್ ಕುಮಾರ್ ಬಂಡಾರು ಅವರನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾಯಿಸಿ ಆದೇಶಿಸಲಾಗಿದೆ. ಶಿವಮೊಗ್ಗ ಎಸ್ ಪಿಯಾಗಿದ್ದ ಬಿ.ಎಂ. ಲಕ್ಷ್ಮಿಪ್ರಸಾದ್ ಅವರನ್ನು ವರ್ಗಾವಣೆ ಮಾಡಿದ್ದು, ಯಾವುದೇ ಹುದ್ದೆಯನ್ನು ನೀಡಿಲ್ಲ.










