ಚಡ್ಡಿಗಳೇ ಎಚ್ಚರ- ನಾವು ಮರಳಿ ಬರುತ್ತೇವೆ ; ಪಿಎಫ್ಐಯಿಂದ ಎಚ್ಚರಿಕೆ ಬರಹ…

54
firstsuddi

ಮಂಗಳೂರು : ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಮತ್ತು ಅದರ ಅಂಗ ಸಂಸ್ಥೆಗಳನ್ನು ನಿಷೇಧ ಮಾಡಿ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ರಸ್ತೆ ಮೇಲೆ ಪಿಎಫ್ಐ ಯಿಂದ ಎಚ್ಚರಿಕೆಯ ಬರಹವೊಂದನ್ನು ಬರೆಯಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೈನಾಡು ರಸ್ತೆಯಲ್ಲಿ ಚಡ್ಡಿಗಳೇ ಎಚ್ಚರ-ಪಿಎಫ್ಐ ನಾವು ಮರಳಿ ಬರುತ್ತೇವೆ ಎಂದು ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ. ತಡರಾತ್ರಿ ಯಾರೋ ಕಿಡಿಗೇಡಿಗಳು ರಸ್ತೆಯಲ್ಲಿ ಈ ರೀತಿ ಬರೆದಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು, ಪೂಂಜಾಲಕಟ್ಟೆ ಪೊಲೀಸರ ಭೇಟಿ ನೀಡಿದ್ದಾರೆ. ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪಿಎಫ್ಐ ಸಂಘಟನೆ ನಿಷೇಧ ಮಾಡಿದರೂ ಈ ರೀತಿ ಬರೆಯಲಾಗಿದೆ. ಇದು ಖಂಡನೀಯ. ಪೊಲೀಸರು ಕಿಡಿಗೇಡಿಗಳನ್ನು ಪತ್ತೆ ಮಾಡಿ ಬಂಧಿಸಬೇಕು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ.