ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದ ಸಿಎಂ ಬೊಮ್ಮಾಯಿ.

59
firstsuddi

ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು. ಜಂಬೂ ಸವಾರಿಯಲ್ಲಿ ಅಂಬಾರಿಯಲ್ಲಿ ಸಾಗುವ ಉತ್ಸವ ಮೂರ್ತಿಯನ್ನು ಮಂಗಳವಾದ್ಯ, ನಾದ ಸ್ವರ ತಂಡದೊಂದಿಗೆ ಮೆರವಣಿಗೆ ಮೂಲಕ ಅರಮನೆಗೆ ಕರೆತರಲಾಗುತ್ತದೆ.

ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಇಂದು ಮಹಿಷಾಸುರನನ್ನ ವಧೆ ಮಾಡಿರುವಂತಹ ದಿನ. ಜನರಿಗೆ ಮಂಗಳ ಉಂಟಾಗಲಿ, ಎಲ್ಲರಿಗೂ ಒಳ್ಳೆದು ಮಾಡಲಿ. ಜನರು ಶಾಂತಿಯಿಂದ ಪಾಲ್ಗೊಂಡಿದ್ದಕ್ಕಾಗಿ ಅಭಿನಂದಿಸುತ್ತೇನೆ. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಡಳಿತಕ್ಕೆ ಅಭಿನಂದಿಸುತ್ತೇನೆ ಎಂದರು.

ಈ ವೇಳೆ ಸಚಿವರಾದ ಎಸ್.ಟಿ.ಸೋಮಶೇಖರ್, ಸುನಿಲ್ ಕುಮಾರ್, ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಸೇರಿದಂತೆ ನಾನಾ ಗಣ್ಯರು ಉಪಸ್ಥಿತರಿದ್ದರು.