ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಆಸ್ಪತ್ರೆಗೆ ದಾಖಲು…

62
firstsuddi

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸದ್ಯ ರಾಜಾಜಿನಗರ ಫಸ್ಟ್ ಬ್ಲಾಕ್ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಂಸಲೇಖ ಅವರ ಆರೋಗ್ಯ ತಪಾಸಣೆ ಮಾಡಿರುವ ವೈದ್ಯರು ಗ್ಯಾಸ್ಟ್ರಿಕ್ ಸಮಸ್ಯೆಯಿಂದಾಗಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ.

ಈ ಹಿಂದೆ ಓಪನ್ ಹಾರ್ಟ್ ಸರ್ಜರಿಯನ್ನು ಹಂಸಲೇಖ ಮಾಡಿಸಿಕೊಂಡಿದ್ದರು. ಒಂದು ದಿನ ವಿಶ್ರಾಂತಿ ಪಡೆಯಲು ಹಂಸಲೇಖಗೆ ವೈದ್ಯರು ಸೂಚಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಒಂದು ದಿನ ಆಸ್ಪತ್ರೆಯಲ್ಲಿ ಹಂಸಲೇಖ ಉಳಿಯಲಿದ್ದಾರೆ.