ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,786 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,21,319ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 12 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,28,847ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,21,319 ಮಂದಿ ಸೋಂಕಿತರ ಪೈಕಿ ಈವರೆಗೆ 4,40,65,963 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










