ಹರೀಶ್ ಪೂಂಜಾ ಕಾರನ್ನು ಅಡ್ಡಗಟ್ಟಿ ತಲ್ವಾರ್ ಝಳಪಿಸಿದ ದುಷ್ಕರ್ಮಿಗಳು…

59
firstsuddi

ಮಂಗಳೂರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ತನ್ನ ಸಂಬಂಧಿಯೋರ್ವರ ಕಾರಿನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ ತಲ್ವಾರ್ ಝಳಪಿಸಿದ ಘಟನೆ ಮಂಗಳೂರು ಹೊರ ವಲಯದ ಫರಂಗಿಪೇಟೆ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.

ನಿನ್ನೆ ರಾತ್ರಿ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ ಹರೀಶ್ ಪೂಂಜಾ ಅವರ ತಮ್ಮ ಕಾರನ್ನು ಬಿಟ್ಟು ಸಂಬಂಧಿಯೋರ್ವರ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಪಡೀಲ್ ನಿಂದ ಫರಂಗಿಪೇಟೆಯವರೆಗೆ ದುಷ್ಕರ್ಮಿಗಳ ತಂಡ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಬೆನ್ನಟ್ಟಿದೆ. ಫರಂಗಿಪೇಟೆಯಲ್ಲಿ ಕಾರು ಸೈಡ್ ಹಾಕುತ್ತಿದ್ದಂತೆಯೇ ಅವಾಚ್ಯವಾಗಿ ಬೈದು ತಲವಾರು ಝಳಪಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಹರೀಶ್ ಪೂಂಜಾ ಅವರ ಕಾರು ಚಾಲಕ ನವೀನ್ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.