ಬೆಂಗಳೂರು : ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ 2ನೇ ಪೋಕ್ಸೋ ಕೇಸ್ ದಾಖಲಾಗುತ್ತಿದ್ದಂತೆ ಅವರ ಪದಚ್ಯುತಿಗಾಗಿ ಒತ್ತಡ, ಆಗ್ರಹ ಹೆಚ್ಚಾಗುತ್ತಿದೆ. ಈ ಮಧ್ಯೆ ಮುರುಘಾ ಶ್ರೀಗಳನ್ನು ಪೀಠದಿಂದ ಕೆಳಗಿಳಿಸಬೇಕೆಂದು ಮಠದ ಭಕ್ತರು, ಮಾಜಿ ಶಾಸಕರು, ಮಾಜಿ ಸಚಿವರ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಒತ್ತಾಯಿಸಿದ್ದಾರೆ.
ಈ ಕುರಿತು ಇಂದು ನಗರದಲ್ಲಿ ಮಾತನಾಡಿದ ಅವರು, ಮಠದ ಭಕ್ತರು, ಮಾಜಿ ಶಾಸಕರ ನಿಯೋಗ ನನ್ನನ್ನು ಭೇಟಿ ಮಾಡಿದ್ದಾರೆ. ಮಠದಲ್ಲಿ ಕಾನೂನು ಪ್ರಕಾರ ಒಂದು ಟ್ರಸ್ಟ್ ಇದೆ. ಕಾನೂನು ಪ್ರಕಾರ ಏನೆಲ್ಲ ಅವಕಾಶ ಇದೆ ಅದನ್ನ ಚರ್ಚೆ ಮಾಡುತ್ತೇವೆ. ಮುರುಘಾ ಮಠಕ್ಕೆ ಹೊಸ ಶ್ರೀಗಳ ನೇಮಕ ವಿಚಾರ ಕಾನೂನು ರೀತಿಯೇ ತೀರ್ಮಾನ ಆಗಲಿದೆ ಎಂದರು.










