ದೇಶದಲ್ಲಿ 2,060 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,30,888ಕ್ಕೆ ಏರಿಕೆ…

149
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,060 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,30,888ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 10 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,28,905ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,30,888 ಮಂದಿ ಸೋಂಕಿತರ ಪೈಕಿ ಈವರೆಗೆ 4,40,75,149 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.