ಶಾಸಕ ಹರೀಶ್ ಪೂಂಜಾಗೆ ಬೆದರಿಕೆ : ಸಿಐಡಿ ತನಿಖೆಗೆ ವಹಿಸಿ ಸರ್ಕಾರ ಆದೇಶ…

55
firstsuddi

ಮಂಗಳೂರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ಕಾರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.

ಗುರುವಾರ ರಾತ್ರಿ ಬಂಟ್ವಾಳದ ಫರಂಗಿಪೇಟೆ ಬಳಿ ಶಾಸಕರ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ತಲ್ವಾರ್ ಝಳಪಿಸಿ ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿತ್ತು. ಈ ಸಂಬಂಧ ಶಾಸಕ ಹರೀಶ್ ಪೂಂಜಾರವರ ಕಾರು ಚಾಲಕ ನವೀನ್ ಪೊಲೀಸರಿಗೆ ದೂರು ನೀಡಿದ್ದರು. ಇದರ ಬೆನ್ನಲ್ಲೇ ಪೊಲೀಸರು ತನಿಖೆ ಆರಂಭಿಸಿ ಸ್ಕಾರ್ಪಿಯೋ ಕಾರಿನಲ್ಲಿದ್ದ ರಿಯಾಜ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು.

ಇದು ಕೊಲೆಯತ್ನ ಪ್ರಕರಣವಲ್ಲ, ಕಾರು ಓವರ್ ಟೇಕ್ ಮಾಡುವ ಭರದಲ್ಲಿ ನಡೆದ ಘಟನೆ ಎಂದು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಸ್ಪಷ್ಟನೆ ನೀಡಿದ್ದರು. ಆದರೆ ಇದೀಗ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಸರ್ಕಾರ ಆದೇಶ ಹೊರಡಿಸಿದೆ.