ದೇಶದಲ್ಲಿ 1,537 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,32,430ಕ್ಕೆ ಏರಿಕೆ…

55
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,537ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,32,430ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,28,913ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,32,430 ಮಂದಿ ಸೋಂಕಿತರ ಪೈಕಿ ಈವರೆಗೆ 4,40,77,068 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.