ಮುರುಘಾ ಶ್ರೀಗೆ ಮತ್ತೆ ಸಂಕಷ್ಟ – ಮತ್ತೊಂದು ಎಫ್ಐಆರ್ ದಾಖಲು…

54
firstsuddi

ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಜೈಲಿನಲ್ಲಿರುವ ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮುರುಘಾಶ್ರೀ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.

ಮಠದ ಆವರಣದ ಹಾಸ್ಟೆಲ್ ನಲ್ಲಿ ಇಬ್ಬರು ಬಾಲಕಿಯರು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. A1 ಮುರುಘಾಶ್ರೀ,A2 ಮಠದ ಕಾರ್ಯದರ್ಶಿ ಪರಮಶಿವಯ್ಯ, A3 ಮುರುಘಾ ಮಠದ ಹಾಸ್ಟೆಲ್ ನ ಲೇಡಿ ವಾರ್ಡನ್, A4 ಮಡಿಲು ದತ್ತು ಕೇಂದ್ರದ ಮುಖ್ಯಸ್ಥೆ ವೀಣಾ ವಿರುದ್ಧ ಬಾಲ ನ್ಯಾಯ ಕಾಯ್ದೆ ಉಲ್ಲಂಘನೆ ಕೇಸ್ ದಾಖಲಿಸಲಾಗಿದೆ.

ಮುರುಘಾಶ್ರೀ ವಿರುದ್ಧ ಆಗಸ್ಟ್ 26ರಂದು ಫೋಕ್ಸೋ ಪ್ರಕರಣ ಹಿನ್ನೆಲೆ ಹಾಸ್ಟೆಲ್ ನಲ್ಲಿದ್ದ ಮಕ್ಕಳು ಬೇರೆಡೆ ಶಿಫ್ಟ್ ವೇಳೆ ನಾಲ್ಕೂವರೆ ವರ್ಷದ ಓರ್ವ ಬಾಲಕಿ ಹಾಗೂ 16 ವರ್ಷದ ಮತ್ತೋರ್ವ ಬಾಲಕಿ ಪತ್ತೆ ಆಗಿದ್ದರು. ಇಬ್ಬರು ಬಾಲಕಿಯರ ಬಗ್ಗೆ ಮಡಿಲು ಯೋಜನೆಗೆ ಮಾಹಿತಿ ನೀಡದೇ ಅಕ್ರಮ ಹಿನ್ನೆಲೆ ಕೇಸ್ ದಾಖಲಿಸಲಾಗಿದೆ.

ಸಾಮಾಜಿಕ ಹೋರಾಟಗಾರ ಮಧುಕುಮಾರ್ ಈ ಬಗ್ಗೆ ಸಿಡಬ್ಲೂಸಿ, ಎಸ್ಪಿ, ಡಿಸಿಗೆ ದೂರು ನೀಡಿದ್ದರು. ಇದನ್ನು ಪರಿಶೀಲಿಸಿ ಮಕ್ಕಳ ರಕ್ಷಣಾ ಘಟಕ ಗ್ರಾಮಾಂತರ ಠಾಣೆಗೆ ದೂರು ಸಲ್ಲಿಸಿದೆ.

ಎರಡನೇ ಎಫ್ ಐಆರ್ ಸಂಬಂಧ ನಿನ್ನೆ ಸಂತ್ರಸ್ತೆ ಮತ್ತು ತಾಯಿ ಹೇಳಿಕೆ ದಾಖಲಿಸಿದ್ದರು. ಸಂತ್ರಸ್ತ ಬಾಲಕಿ, ತಾಯಿ ನೀಡಿದ ಹೇಳಿಕೆಯಲ್ಲಿ ಕೆಲ ವ್ಯತ್ಯಾಸ ಕಂಡು ಬಂದಿದೆ ಎಂದು ತಿಳಿದು ಬಂದಿದೆ.