ಬೆಂಗಳೂರು : ಮುಂದಿನ 5 ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಂದಿನ ಎರಡು ದಿನಗಳಲ್ಲಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದ್ದು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಬುಧವಾರ ಭಾರೀ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ, ಉಡುಪಿ, ಕೊಡಗು, ಶಿವಮೊಗ್ಗ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.










