ಖರ್ಗೆ ನಿವಾಸಕ್ಕೆ ತೆರಳಿ ಅಭಿನಂದಿಸಿದ ಸೋನಿಯಾ ಗಾಂಧಿ.

71
firstsuddi

ನವದೆಹಲಿ : ಕಾಂಗ್ರೆಸ್ ನಿರ್ಗಮಿತ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ತೆರಳಿ ಅಭಿನಂದಿಸಿದ್ದಾರೆ.

ದೆಹಲಿಯ ಖರ್ಗೆ ನಿವಾಸಕ್ಕೆ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ್ ಖರ್ಗೆ ಪತ್ನಿ ಹಾಗೂ ಪುತ್ರ ಪ್ರಿಯಾಂಕ್ ಖರ್ಗೆ ಉಪಸ್ಥಿತರಿದ್ದರು. ಇದೇ ವೇಳೆ ಖರ್ಗೆ ಅವರ ಪತ್ನಿ ರಾಧಾಭಾಯ್ ಅವರನ್ನು ಆತ್ಮೀಯವಾಗಿ ಸೋನಿಯಾ ಗಾಂಧಿ ಅಪ್ಪಿಕೊಂಡರು.

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಳೆದ ಸೋಮವಾರ ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಮಲ್ಲಿಕಾರ್ಜುನ್ ಖರ್ಗೆ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.