ಹಾಸನಾಂಬೆ ದರ್ಶನಕ್ಕೆ ಬಂದಿದ್ದ ಭಕ್ತ ಹೃದಯಾಘಾತದಿಂದ ಸಾವು…

69
firstsuddi

ಹಾಸನ : ಹಾಸನಾಂಬೆ ದೇವಿ ದರ್ಶನಕ್ಕೆ ಬಂದಿದ್ದ ಭಕ್ತರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.

ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಗಿರೀಶ್ (43) ಮೃತ ವ್ಯಕ್ತಿ. ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ಗಿರೀಶ್ ಸಾಮಾನ್ಯ ಸರತಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಹೃದಯಾಘಾತವಾಗಿದೆ. ಸ್ಥಳದಲ್ಲೇ ಅವರು ಸಾವನ್ನಪ್ಪಿದ್ದು, ಪೊಲೀಸರು ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ.

ಹಾಸನದ ಪೆನ್ ಷನ್ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.