ನ.1ರಂದು ಪುನೀತ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ : ಸಿಎಂ

66
firstsuddi

ಬೆಂಗಳೂರು : ನವೆಂಬರ್ 1ರಂದು ವಿಧಾನಸೌಧದಲ್ಲಿ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ಸಭೆ ನಡೆಸಿದರು. ಸಚಿವರಾದ ವಿ.ಸೋಮಣ್ಣ, ಡಾ.ಸುಧಾಕರ್, ಆರ್.ಅಶೋಕ್, ಸುನಿಲ್ ಕುಮಾರ್, ಬೈರತಿ ಬಸವರಾಜ್, ಗೋಪಾಲಯ್ಯ, ರಾಜ್‌ಕುಮಾರ್ ಕುಟುಂಬದ ಸದಸ್ಯರು ಭಾಗಿಯಾಗಿದ್ದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನವೆಂಬರ್. 1ರಂದು ವಿಧಾನಸೌಧದಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಿದ್ದೇವೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ನವೆಂಬರ್ 1ರಂದು ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. 2019ರ ನಂತರ ಯಾರಿಗೂ ಕೂಡ `ಕರ್ನಾಟಕ ರತ್ನ ಪ್ರಶಸ್ತಿ’ ಕೊಟ್ಟಿರಲಿಲ್ಲ. ಈಗ 8 ಜನರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡಲಾಗಿದೆ. ಎಲ್ಲರ ಮನದಾಳದಲ್ಲಿ ಚಿರಸ್ಥಾಯಿಯಾಗಿ ಉಳಿದಿರುವ ಪುನೀತ್ ನಿಜವಾಗಿಯೂ ಕರ್ನಾಟಕ ರತ್ನವಾಗಿದ್ದಾರೆ. ಯುವಜನತೆಗೆ ಅಪ್ಪು ಸದಾ ಪ್ರೇರಣೆ ನೀಡುತ್ತಿದ್ದರು. ಇನ್ನೂ ಪುನೀತ್ ಹೆಸರು ಚಿರಸ್ಥಾಯಿಯಾಗಬೇಕು, ಪ್ರೇರಣೆಯಾಗಬೇಕು ಎಂದು ಈ ಪುರಸ್ಕಾರ ನೀಡಲಾಗುತ್ತಿದೆ. ಹಲವಾರು ಶ್ರೇಷ್ಠ ಸಾಹಿತಿಗಳು, ಮುಖ್ಯ ಅತಿಥಿಗಳು, ನಟರು, ಸಚಿವರು, ಶಾಸಕರು, ಹಿರಿಯ ರಾಜಕಾರಣಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ. ಅರ್ಥಪೂರ್ಣ ಕಾರ್ಯಕ್ರಮ ಮಾಡಲಿದ್ದೇವೆ ಎಂದರು.

ನವೆಂಬರ್ 1ರ ಬಳಿಕ ಬೆಂಗಳೂರಿನಲ್ಲಿ ಮೂರು ಕಾರ್ಯಕ್ರಮ ಮಾಡಲಿದ್ದೇವೆ. 10 ದಿನಗಳ ಅಂತರದಲ್ಲಿ ಬೆಂಗಳೂರಿನ ಮೂರು ಭಾಗಗಳಲ್ಲಿ ಅಪ್ಪು ಕಾರ್ಯಕ್ರಮ ಮಾಡಲು ತೀರ್ಮಾನ ಮಾಡಲಿದ್ದೇವೆ ಎಂದು ಹೇಳಿದ್ದಾರೆ.