ಮೈಸೂರು : ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಮೂವರು ಅಧಿಕಾರಿಗಳ ಮನೆ ಹಾಗೂ ಕಚೇರಿಗಳು ಸೇರಿದಂತೆ ಒಟ್ಟು 7 ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಎಡಿಜಿಪಿ ಪ್ರಶಾಂತ್ ಕುಮಾರ್ ಹಾಗೂ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಡಿಎಸ್ ಪಿಗಳಾದ ಕೃಷ್ಣಯ್ಯ ಮಾಲ್ತೀಶ್, ಪವನ್ ಕುಮಾರ್, ಎಸ್ ಟಿ ಒಡೆಯರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ಮೈಸೂರಿನ ಕೆ.ಸಿ.ಬಡಾವಣೆ ನಿವಾಸಿಯಾಗಿರುವ ಮಡಿಕೇರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪಿಡಬ್ಲ್ಯುಡಿ ಇಲಾಖೆ ಇಇ ಡಿ.ನಾಗರಾಜು ಅವರಿಗೆ ಸೇರಿದ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಮಡಿಕೇರಿಯ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ರಫೀಕ್ ಹಾಗೂ ಅವರ ಇಬ್ಬರು ಸಂಬಂಧಿಕರ ಮನೆ ಮೇಲೆ ದಾಳಿ ನಡೆದಿದೆ.
ಇನ್ನು ಈ ಹಿಂದೆ ಕುಶಾಲನಗರದ ಸರ್ಕಲ್ ಇನ್ಸ್ ಪೆಕ್ಟರ್ ಆಗಿದ್ದ ಎಂ.ಮಹೇಶ್ಅವರು ಸದ್ಯ ಬೆಂಗಳೂರಿನಲ್ಲಿ ಕರ್ತವ್ಯ ಮಾಡುತ್ತಿದ್ದಾರೆ. ಇಂದು ಅವರ ಮನೆ ಮೇಲೆ ಲೋಕಾಯುಕ್ತರ ದಾಳಿ ನಡೆದಿದೆ.










