ರಾಮನಗರ : ಜಿಲ್ಲೆಯ ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ತೀವ್ರ ಅನುಮಾನ ಹುಟ್ಟಿಸಿದೆ.
ಸ್ವಾಮೀಜಿ ಬಂಡೆಮಠದ ಬೆಟ್ಟದ ಮೇಲಿನ ಮನೆಯ ಕಿಟಕಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶ್ರೀಗಳು ಬಂಡೆಮಠದಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದರು. ಚಿಲುಮೆ ಮಠದ ಬಸವಲಿಂಗ ಸ್ವಾಮೀಜಿಯವರು ಇದೇ ರೀತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿ ಒಂದು ವರ್ಷವೂ ಆಗಿಲ್ಲ. ಅದು ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ.
ಸದ್ಯ ಸ್ಥಳಕ್ಕೆ ಕುದೂರು ಪೊಲೀಸ್ ಇನ್ಸ್ ಪೆಕ್ಟರ್ ಎಪಿ.ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿರಾರು ಮಂದಿ ಭಕ್ತರು ಮಠದ ಬಳಿ ಜಮಾಯಿಸಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.










