ಕಾರ್ಗಿಲ್‍ನಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ.

59
firstsuddi

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಲಡಾಖ್ ನ ಕಾರ್ಗಿಲ್ ನಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿದ್ದಾರೆ.

2014ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದಲೂ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ವರ್ಷವೂ ವಿವಿಧ ಮಿಲಿಟರಿ ಸೌಲಭ್ಯ ಕೇಂದ್ರಗಳಿಗೆ ಭೇಟಿ ನೀಡಿ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸುತ್ತಿದ್ದಾರೆ. ಅದರಂತೆ ಇಂದು ಕೂಡ ಕಾರ್ಗಿಲ್ ಯುದ್ಧಭೂಮಿಗೆ ತೆರಳಿ ಯೋಧರೊಂದಿಗೆ ದೀಪಾವಳಿ ಆಚರಿಸಿದ್ದಾರೆ.

ಸೈನಿಕರಿಲ್ಲದೆ ನಮ್ಮ ದೇಶದ ಜನರು ನೆಮ್ಮದಿಯಿಂದ ದೀಪಾವಳಿಯನ್ನು ಆಚರಿಸಲು ಸಾಧ್ಯವಿಲ್ಲ ಎಂದು ಕಾರ್ಗಿಲ್ ನಲ್ಲಿ ಸಶಸ್ತ್ರ ಪಡೆಗಳ ಸದಸ್ಯರೊಂದಿಗೆ ನಡೆದ ಸಂವಾದದಲ್ಲಿ ಮೋದಿ ಹೇಳಿದ್ದಾರೆ. ಭಯೋತ್ಪಾದನೆ ವಿರುದ್ಧದ ಸೈನಿಕರ ಹೋರಾಟವನ್ನು ಶ್ಲಾಘಿಸಿದ ಅವರು, ಡ್ರಾಸ್, ಬಟಾಲಿಕ್ ಮತ್ತು ಟೈಗರ್ ಹಿಲ್ ಅವರ ಧೈರ್ಯಕ್ಕೆ ಸಾಕ್ಷಿಯಾಗಿದೆ. ಕಾರ್ಗಿಲ್ ನಲ್ಲಿ ನಮ್ಮ ಸೈನಿಕರು ಭಯೋತ್ಪಾದನೆಯನ್ನು ಹತ್ತಿಕ್ಕುವಲ್ಲಿ ಯಶಸ್ವಿಯಾಗಿದ್ದಾರೆ, ಈ ಘಟನೆಗೆ ನಾನೇ ಸಾಕ್ಷಿಯಾಗಿದ್ದೇನೆ ಎಂದು ಹೇಳಿದರು.

ನಾವು ಯಾವಾಗಲೂ ಯುದ್ಧವನ್ನು ಕೊನೆಯ ಆಯ್ಕೆ ಎಂದು ಪರಿಗಣಿಸಿದ್ದೇವೆ. ಅದು ಲಂಕಾ ಅಥವಾ ಕುರುಕ್ಷೇತ್ರದಲ್ಲಿ ಯುದ್ಧದಲ್ಲೇ ಇರಲಿ, ಕೊನೆಯವರೆಗೂ ಯುದ್ಧ ನಡೆಯದಂತೆ ತಡೆಯಲು ಎಲ್ಲ ಪ್ರಯತ್ನಗಳನ್ನು ಮಾಡಲಾಯಿತು. ನಾವು ವಿಶ್ವಶಾಂತಿಯ ಪರವಾಗಿದ್ದೇವೆ. ದೀಪಾವಳಿ ಎಂದರೆ ಭಯೋತ್ಪಾದನೆಯ ಅಂತ್ಯದ ಹಬ್ಬ. ಕಾರ್ಗಿಲ್ ಅದನ್ನು ಸಾಬೀತುಪಡಿಸಿದೆ ಎಂದರು.