ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಪತಿ ನಿಧನ…

55
firstsuddi

ಬೆಂಗಳೂರು : ಬಯೋಕಾನ್ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಪತಿ ಜಾನ್ ಶಾ ಅವರು ಇಂದು ನಿಧನರಾಗಿದ್ದಾರೆ.

ಕರುಳಿನ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಜಾನ್ ಶಾ ಅವರು ಕಳೆದ ಕೆಲ ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿಲ್ಸನ್ ಗಾರ್ಡನ್ ರುದ್ರಭೂಮಿಯಲ್ಲಿ ಅವರ ಅಂತ್ಯಕ್ರಿಯೆ ಜರುಗಲಿದೆ ಎಂದು ವರದಿಗಳು ತಿಳಿಸಿವೆ.

ಬೆಂಗಳೂರು ಮೂಲದ ಬಯೋಕಾನ್ ಲಿಮಿಟೆಡ್ ನ ಮಾಜಿ ಉಪಾಧ್ಯಕ್ಷರಾಗಿದ್ದರು. ಮಧುರಾ ಕೋಟ್ಸ್ ಲಿಮಿಟೆಡ್ ನ ಅಧ್ಯಕ್ಷ ಹಾಗೂ ಕೋಟ್ಸ್ ವಿಯೆಲ್ಲಾ ಗ್ರೂಪ್ ನ ಎಂಡಿ ಆಗಿ ಕಾರ್ಯನಿರ್ವಹಿಸಿದ್ದರು.