ಬಿಡುಗಡೆಯಾದ 25 ದಿನಕ್ಕೆ ಕರ್ನಾಟಕದಲ್ಲಿ ಹೊಸ ದಾಖಲೆ ಬರೆದ ಕಾಂತಾರ.

78
firstsuddi

ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಸಿನಿಮಾ ದೇಶ-ವಿದೇಶಗಳಲ್ಲಿ ಸದ್ದು ಮಡುತ್ತಿದೆ. ಇದೀಗ ಕರ್ನಾಟಕದಲ್ಲಿ ಅತ್ಯಂತ ಹೆಚ್ಚು ಜನರು ವೀಕ್ಷಿಸಲ್ಪಟ್ಟ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಬಿಡುಗಡೆಯಾದ 25 ದಿನಕ್ಕೆ 77 ಲಕ್ಷ ಮಂದಿ ಸಿನಿಮಾಪ್ರಿಯರು ಕಾಂತಾರ ವೀಕ್ಷಿಸಿರುವುದು ಹೊಸ ದಾಖಲೆಯಾಗಿದೆ.

ಈವರೆಗೆ ಹೊಂಬಾಳೆ ಬ್ಯಾನರ್ ನಲ್ಲಿ ನಿರ್ಮಿಸಿದ ಚಿತ್ರಗಳ ಪೈಕಿ ಕರ್ನಾಟಕದಲ್ಲಿ ಅತ್ಯಂತ ಹೆಚ್ಚು ಜನರು ವೀಕ್ಷಿಸಿದ ಚಲನಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಮುನ್ನ ಹೊಬಾಳೆ ನಿರ್ಮಿಸಿದ್ದ ರಾಜಕುಮಾರ, ಕೆಜಿಎಫ್ ಚಾಪ್ಟರ್ 1, 2 ಚಿತ್ರಗಳು ರಾಜ್ಯದಲ್ಲಿ ದಾಖಲೆ ಬರೆದಿದ್ದವು. ಇದೀಗ ಕಾಂತಾರ ಚಲನಚಿತ್ರ ಆ ಸಾಲಿಗೆ ಸೇರುವ ಮೂಲಕ ಹೊಂಬಾಳೆ ಸಂಸ್ಥೆಗೆ ಗರಿಮೆ ಮೂಡಿಸಿದೆ.

ಕಾಂತಾರ ಚಿತ್ರ ನಿರ್ಮಾಣ ಮಾಡಿದ ಹೊಂಬಾಳೆ ಸಂಸ್ಥೆ ಈ ಬಗ್ಗೆ ಅಧಿಕೃತವಾಗಿ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿದೆ. ಈವರೆಗೆ ಹೊಂಬಾಳೆ ಫಿಲಮ್ಸ್ ನಿರ್ಮಿಸಿರುವ ಚಲನಚಿತ್ರಗಳ ಪೈಕಿ ಕರ್ನಾಟಕದಲ್ಲಿ ‘ಅತ್ಯಂತ ಹೆಚ್ಚು ಜನ ವೀಕ್ಷಿಸಿದ ಚಿತ್ರ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇನ್ನಷ್ಟು ಹೊಸ ದಾಖಲೆ ನಿರ್ಮಿಸುವ ಹಾದಿಯಲ್ಲಿ ‘ಕಾಂತಾರ’..! ನಿಮ್ಮ ಪ್ರೋತ್ಸಾಹಕ್ಕೆ ನಾವು ಸದಾ ಋಣಿ.. ಧನ್ಯವಾದ ಕರ್ನಾಟಕ’ ಎಂದು ಹೊಂಬಾಳೆ ಸಂಸ್ಥೆ ಟ್ವೀಟ್ ಮಾಡಿದೆ.