ಚಿತ್ರದುರ್ಗ : ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜಿಲ್ಲೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಗಾಂಧಿ ವೃತ್ತದ ಕಡೆಗೆ ಹೋಗುವಾಗ ವೇಗವಾಗಿ ಬಂದ ಕಾರೊಂದು ಪ್ರವಾಸಿ ಮಂದಿರದ ಮುಂಭಾಗದ ರೋಡ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಚಾಲಕ ಮನು ಸೇರಿದಂತೆ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಿಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಸಂಬಂಧ ಚಿತ್ರದುರ್ಗ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










