ಮಹಿಳೆಯ ನಗ್ನ ಫೋಟೋ, ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ – ಆರೋಪಿ ಅರೆಸ್ಟ್…

51
firstsuddi

ಬೆಂಗಳೂರು : ಮಹಿಳೆಯ ನಗ್ನ ವಿಡಿಯೋ ಮತ್ತು ಫೋಟೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಈಶಾನ್ಯ ಪೊಲೀಸರು ಬಂಧಿಸಿದ್ದಾರೆ.

ಮಹಾಂತೇಶ್ ಬಂಧಿತ ಆರೋಪಿ. ಮಹಾಂತೇಶ್, ಮಹಿಳೆಯ ನಗ್ನ ಫೋಟೋ ಇಟ್ಟುಕೊಂಡು ಆಕೆಗೆ 30 ಲಕ್ಷ ಹಣ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಹಣ ನೀಡದಿದ್ದರೆ ಫೋಟೋ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದ.

ಬಳಿಕ ಮಹಿಳೆ ಈಶಾನ್ಯ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆಗೆ ಒಳಪಡಿಸಿದಾಗ, ಹಲವು ಮಹಿಳೆಯರಿಗೆ ವಂಚನೆ ಮಾಡಿರೋದು ಬೆಳಕಿಗೆ ಬಂದಿದೆ. ಸದ್ಯ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.