ವಿಜಯಪುರ : ಕಬ್ಬು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಧೂಳಖೇಡ್ ಬಳಿಯ ಎನ್ಎಚ್ 50 ರಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ಭಯ್ಯಾಜಿ ಶಿಂಧೆ (50), ಸುಮಿತ್ರಾ ಶಿಂಧೆ (45) ಮೃತ ದಂಪತಿ. ಇತರೆ ಒಂಬತ್ತು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ರವಾನೆ ಮಾಡಲಾಗಿದೆ.
ಬೆಳಗಾವಿ ಜಿಲ್ಲೆಯ ಅಥಣಿ ಮೂಲದ ಇವರೆಲ್ಲಾ ಕ್ರೂಸರ್ ನಲ್ಲಿ ಮಹಾರಾಷ್ಟ್ರದ ಅಕ್ಕಲಕೋಟ ಬಳಿಯ ಸ್ವಾಮಿ ಸಮರ್ಥ ಕ್ಷೇತ್ರಕ್ಕೆ ತೆರಳುತ್ತಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಸ್ಥಳಕ್ಕೆ ಝಳಕಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










