ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,112 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,46,880ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 1 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,28,981ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,46,880 ಮಂದಿ ಸೋಂಕಿತರ ಪೈಕಿ ಈವರೆಗೆ 4,40,97,022 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










