ನೇಣು ಹಾಕಿಕೊಳ್ಳುತ್ತಿದ್ದ ಪತ್ನಿಯನ್ನು ಕಾಪಾಡುವ ಬದಲು ವಿಡಿಯೋ ಮಾಡುತ್ತಿದ್ದ ಪತಿ!

72
firstsuddi

ಲಕ್ನೋ : ಹೆಂಡತಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೆ ಇತ್ತ ಪತಿ ಆಕೆಯನ್ನು ಕಾಪಾಡುವ ಬದಲು ಅದನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಗುಲ್ಮೊಹರ್ ನಗರದಲ್ಲಿ ನಡೆದಿದೆ.

ಶೋಭಿತಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಹಾಗೂ ಸಂಜೀವ್ ಗುಪ್ತಾ ವಿಡಿಯೋ ಮಾಡಿದ ಆಕೆ ಪತಿ. ಶೋಭಿತಾ ತನ್ನ ಮೊದಲ ಪ್ರಯತ್ನದಲ್ಲಿ ವಿಫಲಳಾದರೂ ಎರಡನೇ ಪ್ರಯತ್ನದಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದಾಳೆ.

ಶೋಭೀತಾ ನೇಣು ಬಿಗಿದುಕೊಂಡು ಎಷ್ಟೇ ಒದ್ದಾಡುತ್ತಿದ್ದರೂ ಇದನ್ನು ವಿಡಿಯೋ ಮಾಡಿಕೊಳ್ಳುತ್ತಿದ್ದ ಸಂಜೀವ್ ಗುಪ್ತಾ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿರಲಿಲ್ಲ. ಘಟನೆ ಬಳಿಕ ಸಂಜೀವ್ ಗುಪ್ತಾ ಶೋಭಿತಾಳ ತಂದೆ ರಾಜ್ ಕಿಶೋರ್ ಗುಪ್ತಾಗೆ ಕರೆ ಮಾಡಿ, ಶೋಭೀತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದ. ಈ ಹಿನ್ನೆಲೆಯಲ್ಲಿ ಕಿಶೋರ್ ಗುಪ್ತಾ ಗುಲ್ಮೊಹರ್ ನಗರದಲ್ಲಿರುವ ಶೋಭಿತಾಳ ಮನೆಗೆ ಹೋಗಿದ್ದಾರೆ. ಈ ವೇಳೆ ಹಾಸಿಗೆಯ ಮೇಲೆ ಆಕೆಯ ಶವವನ್ನು ಕಂಡಿದ್ದಾರೆ. ಘಟನೆಗೆ ಸಂಬಂಧಿಸಿ ರಾಜ್ ಕಿಶೋರ್ ಸಂಜೀವ್ ನನ್ನು ವಿಚಾರಿಸಿದ್ದಾನೆ. ಆ ವೇಳೆ ಸಂಜೀವ್ ವಿಡಿಯೋವನ್ನು ರಾಜ್ ಕಿಶೋರ್ ಗೆ ತೋರಿಸಿದ್ದಾನೆ.

ಶೋಭೀತಾಳ ಕುಟುಂಬದವರು ಘಟನೆಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸಂಜೀವ್ ಗುಪ್ತಾ ಅವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.