ಚಿಕ್ಕಮಗಳೂರು : 67ನೇ ಕನ್ನಡ ರಾಜ್ಯೋತ್ಸವದ ನಿಮಿತ್ತ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೋಟಿ ಕಂಠ ಗಾಯನ ಮೊಳಗಿದೆ.
ಜಿಲ್ಲೆಯ ಸುಭಾಷ್ ಚಂದ್ರ ಬೋಸ್ ಕ್ರೀಡಾಂಗಣದಲ್ಲಿ ಇಂದು ಅದ್ದೂರಿಯಾಗಿ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆದಿದ್ದು, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ಸಿ.ಟಿ. ರವಿ ಸಖತ್ ಸ್ಟೆಪ್ ಹಾಕಿದ್ದಾರೆ. ಉಸ್ತುವಾರಿ ಸಚಿವ ಭೈರತಿ ಬಸವರಾಜ್, ಕಾಫಿನಾಡು ಚಂದು ಈ ಕಾರ್ಯಕ್ರಮಕ್ಕೆ ಸಾಥ್ ನೀಡಿದರು.
ಈ ಕಾರ್ಯಕ್ರಮದಲ್ಲಿ ಸಾವಿರಾರು ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಿದ್ದು ವಿಶೇಷವಾಗಿತ್ತು. ಅಣ್ಣಾವ್ರ ಹಾಡಿಗೆ ಜಿಲ್ಲೆಯ ಬಿಜೆಪಿ ಮುಖಂಡರು ಕುಣಿದು ಕುಪ್ಪಳಿಸಿದರು. ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಸೇರಿದಂತೆ ಹಲವು ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಅಧಿಕಾರಿ ವರ್ಗದವರು, ಶಾಲಾ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.










