ಬೆಂಗಳೂರು : ಕನ್ನಡ ರಾಜ್ಯೋತ್ಸವ ಹಿನ್ನೆಲೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ಇನ್ನು ಮುಂದೆ ಪ್ರಯಾಣಿಕರು ಮೊಬೈಲ್ ನಲ್ಲೇ ಮೆಟ್ರೋ ಪ್ರಯಾಣದ ಟಿಕೆಟ್ ಖರೀದಿಸಲು ಅವಕಾಶ ನೀಡಲಾಗಿದೆ.
ನಾಳೆಯಿಂದ ಮೊಬೈಲ್ ನಲ್ಲಿ ಟಿಕೆಟ್ ಖರೀದಿಸಬಹುದಾಗಿದ್ದು, ಕ್ಯೂ ಆರ್ ಕೋಡ್ ಬಳಸಿ ಪ್ರವೇಶ-ನಿರ್ಗಮನ ಅವಕಾಶ ಪಡೆಯಬಹುದಾಗಿದೆ. ಇದು ಪ್ರಯಾಣಿಕರ ಸಮಯ ಉಳಿತಾಯ, ಚಿಲ್ಲರೆ ಸಮಸ್ಯೆ ಬಗೆಹರಿಸುವ ಉದ್ದೇಶವನ್ನೂ ಹೊಂದಿದೆ.










