ಕಾರು ಅಪಘಾತ : ನಟಿ ರಂಭಾ ಪ್ರಾಣಾಪಾಯದಿಂದ ಪಾರು, ಪುತ್ರಿಗೆ ಗಂಭೀರ ಗಾಯ…

68
firstsuddi

ಕನ್ನಡ ಸೇರಿದಂತೆ ನಾನಾ ಭಾಷೆಗಳಲ್ಲಿ ನಟಿಸಿರುವ ನಟಿ ರಂಭಾ ಅವರು ಚಲಾಯಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ನಟಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಅವರ ಮಗಳು ಸಶಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾಳೆ.

ರಂಭಾ ಮತ್ತು ಪತಿ ಇಂದ್ರಕುಮಾರ್ ಪದ್ಮನಾಥನ್ ಕೆನಡಾದ ಒಂಟಾರಿಯೊ ಪ್ರಾಂತ್ಯದ ರಾಜಧಾನಿ ಟೊರೊಂಟೊದಲ್ಲಿ ನೆಲೆಸಿದ್ದಾರೆ. ಈ ದಂಪತಿಗೆ ಇಬ್ಬರು ಪುತ್ರಿಯರಿದ್ದು, ಓರ್ವ ಪುತ್ರನಿದ್ದಾನೆ. ಮಕ್ಕಳನ್ನು ಶಾಲೆಯಿಂದ ಕರೆತರುವಾಗ ಈ ಅಪಘಾತ ಸಂಭವಿಸಿದೆ. ರಂಭಾ ಚಲಾಯಿಸುತ್ತಿದ್ದ ಕಾರಿಗೆ ಬಲ ಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ.

ಕಾರಿನ ಏರ್ ಬ್ಯಾಗ್ ತೆಗೆದುಕೊಂಡಿದ್ದರಿಂದ ದೊಡ್ಡ ಮಟ್ಟದ ತೊಂದರೆ ಉಂಟಾಗಿಲ್ಲ. ಕಾರು ಜಖಂಗೊಂಡಿದ್ದು, ಸಶಾಗೆ ಗಾಯಗಳಾಗಿವೆ. ಈ ಎಲ್ಲ ವಿವರಗಳನ್ನು ಸ್ವತಃ ರಂಭಾ ಅವರೇ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.