ಕಲ್ಯಾಣ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿದ ನೂರಾರು ಮಂದಿ ಪೊಲೀಸರ ವಶಕ್ಕೆ…

61
firstsuddi

ಕಲಬುರಗಿ : ತೆಲಂಗಾಣ ಮಾದರಿಯಲ್ಲಿ ಪ್ರತ್ಯೇಕ ರಾಜ್ಯ ನಿರ್ಮಾಣ ಮಾಡಬೇಕೆಂದು ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿದೆ.

ಮಾಜಿ ಸಚಿವ ದಿ. ಉಮೇಶ ಕತ್ತಿ ಹಾಗೂ ವೈಜನಾಥ ಪಾಟೀಲ್ರ ಭಾವಚಿತ್ರ ಮತ್ತು ಪ್ರತ್ಯೇಕ ರಾಜ್ಯದ ಧ್ವಜ ಹಿಡಿದು ಎಂ.ಎಸ್.ಪಾಟೀಲ್ ನರಿಬೋಳ ನೇತೃತ್ವದಲ್ಲಿ ನೂರಾರು ಜನ ಸೇರಿ ಹೋರಾಟ ನಡೆಸಿದ್ದರು. ಕೋರ್ಟ್ ಮಾರ್ಗವಾಗಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತಕ್ಕೆ ಧ್ವಜಾರೋಹಣ ಮಾಡಲು ಬರುವಾಗ ಮಾರ್ಗ ಮಧ್ಯೆ ಅಡ್ಡಗಟ್ಟಿದ ಪೊಲೀಸರು ಎಲ್ಲರನ್ನು ವಶಕ್ಕೆ ಪಡೆದರು.

ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗಾಗಿ 371 ಜೆ ವಿದೇಯಕ ಜಾರಿಗೊಳಿಸಿದ್ದರೂ ರಾಜಕೀಯ ಇಚ್ಛಾಶಕ್ತಿ ಕೊರತೆ, ರಾಜ್ಯ ಸರ್ಕಾರದ ಮಲತಾಯಿ ಧೋರಣೆಯಿಂದ ಈ ಭಾಗದ ಪ್ರತಿಯೊಂದು ಕ್ಷೇತ್ರಕ್ಕೂ ಅನ್ಯಾಯ ಮುಂದುವರಿದಿದೆ. ಉದ್ಯೊಗ ನೇಮಕಾತಿ, ಮೀಸಲಾತಿ, ಮುಂಬಡ್ತಿ ವಿಷಯದಲ್ಲಿ ಕಡೆಗಣನೆ ಮಾಡಲಾಗುತ್ತಿದೆ. ಪದೇಪದೆ ಈ ಭಾಗಕ್ಕೆ ರಾಜ್ಯ ಸರ್ಕಾರ ದ್ರೋಹ ಬಗೆಯುತ್ತಿದೆ. ನಮ್ಮ ಭಾಗದ ಸಮಗ್ರ ಅಭಿವೃದ್ಧಿಗಾಗಿ ತೆಲಂಗಾಣ ಮಾದರಿಯಲ್ಲಿ ಪ್ರತ್ಯೇಕ ರಾಜ್ಯ ನೀಡಬೇಕೆಂದು ಹೋರಾಟಗಾರರು ಆಗ್ರಹಿಸಿದ್ದಾರೆ.