ಪುನೀತ್ ರಾಜ್‌ಕುಮಾರ್‌ಗೆ ‘ಕರ್ನಾಟಕ ರತ್ನ’ ಪ್ರದಾನ : ಬೆಂಗಳೂರಿಗೆ ಆಗಮಿಸಿದ ಸೂಪರ್ ಸ್ಟಾರ್ ರಜನಿಕಾಂತ್.

89
firstsuddi

ಬೆಂಗಳೂರು : ಪುನೀತ್ ರಾಜ್‌ಕುಮಾರ್‌ ಅವರಿಗೆ ಇಂದು ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದ್ದು, ಸಂಜೆ 4 ಗಂಟೆಗೆ ವಿಧಾನ ಸೌಧ ಮುಂಭಾಗದಲ್ಲಿ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಇಂದು ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ.

ಎಚ್.ಎ.ಎಲ್ ಏರ್ಪೋಟಿಗೆ ಬಂದಿಳಿದ ರಜನಿಯನ್ನು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಮತ್ತು ಸರಕಾರದ ಪ್ರತಿನಿಧಿಗಳು ಹೂಗುಚ್ಛ ನೀಡುವ ಮೂಲಕ ಸ್ವಾಗತ ಕೋರಿದರು. ಸಚಿವ ಮುನಿರತ್ನ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.