ಪುನೀತ್‍ಗೆ ‘ಕರ್ನಾಟಕ ರತ್ನ’ ಪ್ರದಾನ – ಪ್ರಶಸ್ತಿ ಸ್ವೀಕರಿಸಿದ ಅಶ್ವಿನಿ ಪುನೀತ್ ರಾಜ್​ಕುಮಾರ್​​​.

138
firstsuddi

ಬೆಂಗಳೂರು : ನಟ ದಿವಂಗತ ಪುನೀತ್ ರಾಜ್​ಕುಮಾರ್​​ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಸಮಾರಂಭದಲ್ಲಿ ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್, ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್, ಸುಧಾಮೂರ್ತಿ, ಸಿಎಂ ಬಸವರಾಜ ಬೊಮ್ಮಾಯಿ, ಡಾ. ರಾಜ್​ಕುಮಾರ್ ಕುಟುಂಬದ ಸದಸ್ಯರು ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

ಇದೇ ವೇಳೆ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ್ದಕ್ಕಾಗಿ ಸರ್ಕಾರಕ್ಕೆ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಕೃತಜ್ಞತೆ ಸಲ್ಲಿಸಿದರು.