ಅಕ್ರಮ ಹಣ ವರ್ಗಾವಣೆ ಪ್ರಕರಣ ರದ್ದು ಕೋರಿ ಡಿಕೆಶಿ ಅರ್ಜಿ – ಇಡಿಗೆ ನೋಟಿಸ್ ಜಾರಿ…

65
firstsuddi

ನವದೆಹಲಿ : ತಮ್ಮ ವಿರುದ್ಧ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಜಾರಿ ನಿರ್ದೇಶನಾಲಯ (ಇಡಿ) ಗೆ ನೋಟಿಸ್ ಜಾರಿ ಮಾಡಿದೆ.

ಇಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮುಕ್ತಾ ಗುಪ್ತಾ ಮತ್ತು ನ್ಯಾ.ಅನೀಶ್ ದಯಾಳ್ ಪೀಠ ಪ್ರಕರಣ ಬಗ್ಗೆ ಡಿಸೆಂಬರ್ 15ರೊಳಗೆ ಉತ್ತರ ಸಲ್ಲಿಸುವಂತೆ ತನಿಖಾ ಸಂಸ್ಥೆಗೆ ಸೂಚಿಸಿದೆ. ಪ್ರಕರಣದ ರದ್ದು ಕೋರಿರುವ ಡಿ.ಕೆ ಶಿವಕುಮಾರ್, ಅರ್ಜಿಯಲ್ಲಿ ಪಿಎಂಎಲ್ ಎ ಸೆಕ್ಷನ್ 13 ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದ್ದಾರೆ.