ನಾಪತ್ತೆಯಾಗಿದ್ದ ರೇಣುಕಾಚಾರ್ಯ ಸಹೋದರನ ಪುತ್ರ ಶವವಾಗಿ ಪತ್ತೆ…

55
firstsuddi

ದಾವಣಗೆರೆ : ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯಸಹೋದರನ ಮಗ ಚಂದ್ರಶೇಖರ್ ಶವ ಕಾರಿನಲ್ಲಿ ಪತ್ತೆಯಾಗಿದೆ.

ಚಂದ್ರಶೇಖರ್ ಅವರ ಕ್ರೇಟಾ ಕಾರು ಸೊರಟೂರು ಬಳಿ ಇರುವ ತುಂಗಾಭದ್ರ ಕಾಲುವೆಯಲ್ಲಿ ಸಿಕ್ಕಿದೆ. ಹೊನ್ನಾಳಿ ಹಾಗೂ ನ್ಯಾಮತಿ ಮಾರ್ಗ ಮಧ್ಯೆ ಇರುವ ಕಾಲುವೆಯಲ್ಲಿ ಪತ್ತೆಯಾದ ಕಾರನ್ನು ಮೇಲಕ್ಕೆ ಎತ್ತಲಾಗಿದೆ. ಕಾರಿನಲ್ಲೇ ಕೊಳೆತ ಸ್ಥಿತಿಯಲ್ಲಿ ಚಂದ್ರಶೇಖರ್ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಶಾಸಕ ರೇಣುಕಾಚಾರ್ಯ ಹಾಗೂ ಕುಟುಂಬಸ್ಥರು ಸ್ಥಳಕ್ಕೆ ದೌಡಾಯಿಸಿದ್ದು, ಅವರ ಆಕ್ರಂದನ ಮುಗಿಲುಮುಟ್ಟಿದೆ.

ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರ ಎಂ.ಪಿ.ರಮೇಶ್ ಪುತ್ರ ಚಂದ್ರಶೇಖರ್ ಭಾನುವಾರ (ಅಕ್ಟೋಬರ್ 30) ರಂದು ನಾಪತ್ತೆಯಾಗಿದ್ದರು. ಒಟ್ಟಿನಲ್ಲಿ ಚಂದ್ರಶೇಖರ್ ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗುತ್ತಿದೆ.