ತುಮಕೂರಿನಲ್ಲಿ ಬಾಣಂತಿ -ಶಿಶುಗಳ ಸಾವು ಪ್ರಕರಣ : ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ…

55
firstsuddi

ಬೆಂಗಳೂರು : ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೇ ಬಾಣಂತಿ ಮತ್ತು ಅವಳಿ ಮಕ್ಕಳ ಸಾವಿನ ಪ್ರಕರಣದ ನಂತರ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆ, ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿ ಪ್ರಕಟಿಸಿದೆ.

ಮಾರ್ಗಸೂಚಿಯಲ್ಲಿ ಏನಿದೆ?
• ತುರ್ತು ಆರೋಗ್ಯ ಸೇವೆಯನ್ನು ನೀಡುವ ಸಂದರ್ಭದಲ್ಲಿ ಯಾವುದೇ ದಾಖಲೆಗಳು ಅವಶ್ಯವಿರುವುದಿಲ್ಲ
• ತಾಯಿ ಕಾರ್ಡ್, ಆಧಾರ ಕಾರ್ಡ್, ಪಡಿತರ ಚೀಟಿ ಇತರೆ ದಾಖಲೆಗಳು ಇಲ್ಲದೇ ಇದ್ದರೂ ಚಿಕಿತ್ಸೆ ನೀಡಬೇಕು
• ಆರೋಗ್ಯ ಸೇವೆಯನ್ನು ನೀಡುವಾಗ ರೋಗಿಯ ರಾಷ್ಟ್ರೀಯತೆ, ಜಾತಿ, ವರ್ಗ, ಆರ್ಥಿಕ ಸ್ಥಿತಿಯನ್ನು ಅವಲಂಭಿಸಬಾರದು
• ತುರ್ತು ಪರಿಸ್ಥಿತಿಯಲ್ಲಿ ರೋಗಿಯ ನೋವು ಸಂಕಟವನ್ನು ನಿವಾರಿಸುವುದು ವೈದ್ಯರ, ಶುಶ್ರೂಷಕರ ಮತ್ತು ಇತರೆ ಸಿಬ್ಬಂದಿ ವರ್ಗದವರ ಆದ್ಯ ಕರ್ತವ್ಯ
• ಇಂತಹ ಘಟನೆಯು ಮರುಕಳಿಸಿದರೆ ಅಂತಹ ಅಧಿಕಾರಿ, ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗುವುದು, ಅಲ್ಲದೆ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಲಾಗುತ್ತದೆ.

ಪ್ರಕರಣದ ಹಿನ್ನಲೆ:
ಕಸ್ತೂರಿ (30) ಎಂಬುವವರು ಬುಧವಾರ ಹೆರಿಗೆಗೆಂದು ಜಿಲ್ಲಾಸ್ಪತ್ರೆಗೆ ತೆರಳಿದ್ದರು. ಆದರೆ ತಾಯಿಗೆ ಆಧಾರ್ ಕಾರ್ಡ್ ಇಲ್ಲದ ಕಾರಣಕ್ಕೆ ಕಸ್ತೂರಿಯವರನ್ನು ವೈದ್ಯಕೀಯ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿಕೊಳ್ಳದೇ, ವಾಪಸ್ ಕಳುಹಿಸಿದ್ದಾರೆ. ನಿನ್ನೆ ಬೆಳಗ್ಗೆ ಕಸ್ತೂರಿಗೆ ಮನೆಯಲ್ಲಿಯೇ ಹೆರಿಗೆ ಆಗಿದೆ. ಆದರೆ ಸೂಕ್ತ ಚಿಕಿತ್ಸೆ ಸಿಗದೇ ಅವಳಿ ಶಿಶುಗಳ ಜೊತೆಗೆ ಬಾಣಂತಿಯೂ ಮೃತಪಟ್ಟಿದ್ದಾರೆ.