ತಿರುವನಂತಪುರಂ : ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಕೇರಳ ಕಲಾಮಂಡಲಂ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಸ್ಥಾನದಿಂದ ರಾಜ್ಯ ಸರ್ಕಾರ ನಿನ್ನೆ ವಜಾಗೊಳಿಸಿದೆ. ಖಾನ್ ಅವರಿದ್ದ ಕುಲಪತಿ ಸ್ಥಾನಕ್ಕೆ ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರದ ಗಣ್ಯ ವ್ಯಕ್ತಿಯನ್ನು ನೇಮಿಸಲು ವಿಶ್ವವಿದ್ಯಾಲಯದ ನಿಯಮಗಳನ್ನು ಬದಲಾಯಿಸುವುದಾಗಿ ರಾಜ್ಯ ಸರ್ಕಾರ ಹೇಳಿದೆ.
ಕೇರಳ ಗವರ್ನರ್ ಮತ್ತು ರಾಜ್ಯ ಸರ್ಕಾರದ ನಡುವಿನ ಜಟಾಪಟಿಯ ನಡುವೆಯೇ ಪಿಣರಾಯಿ ವಿಜಯನ್ ಸರ್ಕಾರ ರಾಜ್ಯಪಾಲರನ್ನು ಕುಲಪತಿ ಸ್ಥಾನದಿಂದ ತೆರವು ಮಾಡುವ ನಿರ್ಧಾರ ಕೈಗೊಂಡಿದೆ.
ಕಳೆದ ಹಲವು ದಿನಗಳಿಂದ ಉಪಕುಲಪತಿಗಳ ನೇಮಕ ಸೇರಿದಂತೆ ವಿಶ್ವವಿದ್ಯಾಲಯಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರ ನಡುವೆ ಭಿನ್ನಾಭಿಪ್ರಾಯ ಹೆಚ್ಚುತ್ತಿದೆ. ಹೀಗಾಗಿ ರಾಜ್ಯಪಾಲರನ್ನು ಕುಲಪತಿ ಹುದ್ದೆಯಿಂದ ವಜಾಗೊಳಿಸಲಾಗಿದೆ.










