ಗ್ರಾಹಕರಿಗೆ ದರ ಏರಿಕೆ ಶಾಕ್ ; ನಂದಿನಿ ಹಾಲು, ಮೊಸರಿನ ಬೆಲೆ ಹೆಚ್ಚಳ…

65
firstsuddi

ಬೆಂಗಳೂರು : ಪ್ರತಿ ಲೀಟರ್ ನಂದಿನಿ ಹಾಲು ಮತ್ತು ಮೊಸರಿನ ದರ 3 ರೂ. ಏರಿಕೆಯಾಗಲಿದ್ದು, ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಜಾರಿಗೆ ಬರಲಿದೆ. ಹೆಚ್ಚಳ ಮಾಡಲಾದ ದರವನ್ನು, ಪ್ರೋತ್ಸಾಹ ಧನದ ರೂಪದಲ್ಲಿ ರೈತರಿಗೆ ವರ್ಗಾವಣೆ ಮಾಡಲಾಗುವುದು ಎಂದು ಕೆಎಂಫ್ ತಿಳಿಸಿದೆ.

ಯಾವ ಹಾಲಿಗೆ ಎಷ್ಟು ದರ ?
• ಟೋನ್ಡ್ ಹಾಲು 37 ರೂ ರಿಂದ 40 ರೂಗೆ ಏರಿಕೆ

• ಹೋಮೋಜಿನೈಸ್ಡ್ ಹಾಲು 38 ರೂ ರಿಂದ 41 ರೂಗೆ ಏರಿಕೆ

• ಸ್ಪೆಷಲ್ ಹಾಲು 43 ರೂ ರಿಂದ 46 ರೂಗೆ ಏರಿಕೆ

• ಶುಭಂ ಹಾಲು 43 ರೂ ರಿಂದ 46 ರೂಗೆ ಏರಿಕೆ

• ಹೊಮೊಜಿನೈಸ್ಡ್ ಸ್ಟ್ಯಾಂಡಡೈಸ್ಡರ್ ಹಾಲು 44 ರೂ ರಿಂದ 47 ರೂಗೆ ಏರಿಕೆ

• ಸಮೃದ್ಧಿ ಹಾಲು 48 ರೂ ರಿಂದ 51 ರೂಗೆ ಏರಿಕೆ

• ಸಂತೃಪ್ತಿ ಹಾಲು 50 ರೂ ರಿಂದ 53 ರೂಗೆ ಏರಿಕೆ

• ಡಬಲ್ ಟೋನ್ಡ್ ಹಾಲು 36 ರೂ ರಿಂದ 39 ರೂಗೆ ಏರಿಕೆ

• ಮೊಸರಿನ ದರ 45 ರೂ ರಿಂದ 48 ರೂಗೆ ಹೆಚ್ಚಳ ಮಾಡಲಾಗಿದೆ