ವಿಜಯಪುರ : ಗೋಳಗುಮ್ಮಟ ವೀಕ್ಷಣೆಗೆ ಬಂದಿದ್ದ ವ್ಯಕ್ತಿಯೊಬ್ಬ ಗುಮ್ಮಟದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನಗರದ ಗೋಳಗುಮ್ಮಟ ಆವರಣದಲ್ಲಿ ಈ ಘಟನೆ ನಡೆದಿದೆ. ಸಲೀಂ ತಿಕೋಟ್ಕರ್ (55) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಸಲೀಂ ತಿಕೋಟ್ಕರ್ ವಿಶ್ವ ವಿಖ್ಯಾತ ಗೋಳಗುಮ್ಮಟ ವೀಕ್ಷಿಸಲೆಂದು ಬಂದಿದ್ದ. ಈ ವೇಳೆ ಗೋಳಗುಮ್ಮಟದ ಮೇಲಿನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










