ಮುಂದಿನ ಚುನಾವಣೆಯಲ್ಲಿ ಒಂದೇ ಕ್ಷೇತ್ರದಿಂದ ಸ್ಪರ್ಧೆ : ಸಿದ್ದರಾಮಯ್ಯ ಸ್ಪಷ್ಟನೆ…

58
firstsuddi

ಮೈಸೂರು : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಹಲವು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವಂತೆ ಒತ್ತಡ ಬಂದಿದೆ. ಆದರೆ ಒಂದೇ ಕ್ಷೇತ್ರದಿಂದ ಮಾತ್ರ ಸ್ಪರ್ಧೆ ಮಾಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಖಾಸಗಿ ಕಾರ್ಯಕ್ರಮದ ನಿಮಿತ್ತ ನಗರಕ್ಕೆ ಆಗಮಿಸಿದ ಸಿದ್ದರಾಮಯ್ಯ, ಮುಂದಿನ ಚುನಾವಣೆಯಲ್ಲಿ ಸ್ಪರ್ಧೆಯ ಕುರಿತು ಮಾತನಾಡಿದ್ದು, ಕೋಲಾರ, ಬಾದಾಮಿ, ವರುಣ ಕ್ಷೇತ್ರಗಳನ್ನು ಶಾರ್ಟ್ ಲಿಸ್ಟ್ ಮಾಡಿದ್ದೇನೆ, ಅದರಲ್ಲಿ ಒಂದು ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಅಂತಿಮವಾಗಿ ಎಲ್ಲಿ ಸ್ಪರ್ಧಿಸಬೇಕೆಂದು ವರಿಷ್ಠರು ನಿರ್ಧರಿಸುತ್ತಾರೆ. ಚುನಾವಣೆ ದಿನಾಂಕ ಘೋಷಣೆ ಬಳಿಕ ಸ್ಪರ್ಧಿಸುವ ಕ್ಷೇತ್ರ ಹೇಳುತ್ತೇನೆ ಎಂದರು.

ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ ಕೆ.ಶಿವಕುಮಾರ್ ಸ್ಪರ್ಧೆ ಬೇಡ ಎಂಬ ಮಾಜಿ ಸಚಿವ ಸಂತೋಷ್ ಲಾಡ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ತಮ್ಮ ಅಭಿಪ್ರಾಯ ಹೇಳಿದ್ದಾರೆ. ಅದನ್ನೂ ಪರಿಗಣನೆಗೆ ತೆಗೆದುಕೊಳ್ಳೋಣ ಎಂದರು.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಇದು ಆಪರೇಷನ್ ಕಮಲ ಭ್ರಷ್ಟಾಚಾರದ ಮುಂದುವರಿದ ಭಾಗ. ಗೆಲ್ಲೋಕೆ ಏನೆಲ್ಲಾ ಆಟ ಆಡುತ್ತಾರೆ ಅನ್ನೋದಕ್ಕೆ ಇದು ಉದಾಹರಣೆ. ಆಪರೇಷನ್ ಕಮಲ ಹುಟ್ಟುಹಾಕಿದ್ದೇ ಬಿ.ಎಸ್.ಯಡಿಯೂರಪ್ಪ ಎಂದು ಹೇಳಿದ್ದಾರೆ.