ಮತದಾರರ ಮಾಹಿತಿ ಕಳವು ಪ್ರಕರಣ ; ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್ ಬಂಧನ…

61
firstsuddi

ಬೆಂಗಳೂರು : ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್ ನನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದಲ್ಲಿ ಈಗಾಗಲೇ ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಸಹೋದರ ಕೆಂಪೇಗೌಡ, ಚಿಲುಮೆ ಸಂಸ್ಥೆಯ ಸಿಬ್ಬಂದಿಯಾದ ಧರ್ಮೇಶ್, ರೇಣುಕಾ ಪ್ರಸಾದ್ ಹಾಗೂ ಇ-ಪ್ರಕ್ಯೂರ್ಮೆಂಟ್ ಮೇಲ್ವಿಚಾರಕ ಪ್ರಜ್ವಲ್ ಎಂಬುವವರನ್ನು ಪೊಲೀಸರು ಬಂಧಿಸಿದ್ದರು. ಇದೀಗ ತಡರಾತ್ರಿ ರವಿಕುಮಾರ್ ಬಂಧನವಾಗಿದೆ. ವಕೀಲರ ಭೇಟಿಗೆ ಬಂದಿದ್ದಾಗ ಲಾಲ್‌ಬಾಗ್‌ ಬಳಿ ರವಿಕುಮಾರ್​ನನ್ನು ಪೊಲೀಸರು ಬಂಧಿಸಿದ್ದಾರೆ.