ಬೆಳಗಾವಿ : ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ…

118
firstsuddi

ಬೆಳಗಾವಿ: ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಸತಿ ನಿಲಯದಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೈಲಹೊಂಗಲ ಪಟ್ಟಣದ ಇಂದಿರಾ ನಗರದಲ್ಲಿ ನಡೆದಿದೆ. ಜಿಲ್ಲೆಯ ಬೈಲಹೊಂಗಲ ತಾಲೂಕಿನ ಕೊಡ್ಡಿವಾಡ ಗ್ರಾಮದ ಪರುಶರಾಮ ಕೋನೇರಿ(20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಬೇರೆ ವಿದ್ಯಾರ್ಥಿಗಳು ಕಾಲೇಜಿಗೆ ಹೋದ ಬಳಿಕ ಈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.